Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:38 - ಪರಿಶುದ್ದ ಬೈಬಲ್‌

38 ಯೇಸು ಸಭಾಮಂದಿರದಿಂದ ಹೊರಟು ಸೀಮೋನನ ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ಕಠಿನ ಜ್ವರದಿಂದ ಬಹಳ ಕಷ್ಟಪಡುತ್ತಿರಲಾಗಿ ಆಕೆಯ ವಿಷಯದಲ್ಲಿ ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಜೆಜು ಸಿನಾಗೊಗ್ ಸೊಡುನ್ ಸಿಮಾವಾಚ್ಯಾ ಘರಾಕ್ ಗೆಲೊ ಸಿಮಾವಾಚಿ ಮಾಮಿ ತಾಪಾನ್ ಆರಾಮ್ ನಸ್ತಾನಾ ನಿಜಲ್ಲಿ, ಅನಿ ತೆನಿ ತಿಚ್ಯಾ ವಿಶಯಾತ್ ಜೆಜುಕ್ಡೆ ಬೊಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:38
9 ತಿಳಿವುಗಳ ಹೋಲಿಕೆ  

ಆದರೆ ಈಗಲೂ ಸಹ ನೀನು ಏನನ್ನೇ ಕೇಳಿಕೊಂಡರೂ ದೇವರು ನಿನಗೆ ಕೊಡುತ್ತಾನೆ ಎಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.


ಕ್ರಿಸ್ತ ವಿಶ್ವಾಸಿಯಾದ ಹೆಂಡತಿಯನ್ನು ನಮ್ಮೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಲು ಉಳಿದ ಅಪೊಸ್ತಲರಂತೆ, ಪ್ರಭುವಿನ ಸಹೋದರರಂತೆ ಮತ್ತು ಕೇಫನಂತೆ ನಮಗೆ ಹಕ್ಕಿಲ್ಲವೇ?


ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.


ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು