Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:41 - ಪರಿಶುದ್ದ ಬೈಬಲ್‌

41 ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಸುಮಾರ್ ಲೊಕಾನಿತ್ನಾ ಗಿರೆಬಿ ಭಾಯ್ರ್ ಗೆಲಿ. ಅನಿ ಗಿರೆ “ತಿಯಾ ದೆವಾಚೊ ಲೆಕ್” ಮನುನ್ ಬೊಬ್ ಮಾರುಕ್ ಲಾಗಲ್ಲಿ, ಜೆಜುನ್ ತ್ಯಾ ಗಿರ್‍ಯಾಕ್ನಿ ಬೊಲುಕ್ ದಿವ್ಕ್ ನಾ ಕಶ್ಶಾಕ್ ಮಟ್ಲ್ಯಾರ್, ತೊ ಮೆಸ್ಸಿಯಾ ಮನುನ್ ತೆಂಕಾ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:41
14 ತಿಳಿವುಗಳ ಹೋಲಿಕೆ  

ಯೇಸು ನಾನಾ ಬಗೆಯ ರೋಗಗಳಿಂದ ನರಳುತ್ತಿದ್ದ ಅನೇಕ ಜನರನ್ನು ಗುಣಪಡಿಸಿದನು; ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಬಿಡಿಸಿದನು. ಆದರೆ ಆ ದೆವ್ವಗಳಿಗೆ ಮಾತನಾಡಲು ಆತನು ಅವಕಾಶ ಕೊಡಲಿಲ್ಲ; ಏಕೆಂದರೆ ಯೇಸು ಯಾರೆಂಬುದು ದೆವ್ವಗಳಿಗೆ ಗೊತ್ತಿತ್ತು.


ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.


ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.


ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.


ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಯೇಸು, “ಸುಮ್ಮನಿರು! ಅವನೊಳಗಿಂದ ಹೊರಗೆ ಬಾ!” ಎಂದು ಆಜ್ಞಾಪಿಸಿದನು.


ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.


ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.


ಅಂದು ಸೂರ್ಯನು ಮುಳುಗಿದ ಮೇಲೆ, ಜನರು ಕಾಯಿಲೆಯವರನ್ನೂ ದೆವ್ವಗಳಿಂದ ಪೀಡಿತರಾಗಿದ್ದವರನ್ನೂ ಆತನ ಬಳಿಗೆ ಕರೆತಂದರು.


ಯೇಸು ಆಕೆಯ ಬಳಿ ನಿಂತು, ಆಕೆಯನ್ನು ಬಿಟ್ಟುಹೋಗುವಂತೆ ಜ್ವರಕ್ಕೆ ಆಜ್ಞಾಪಿಸಿದನು. ಆ ಕೂಡಲೇ ಆಕೆಗೆ ಗುಣವಾಯಿತು. ಆಕೆ ಎದ್ದು ಅವರನ್ನು ಉಪಚರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು