ಲೂಕ 4:42 - ಪರಿಶುದ್ದ ಬೈಬಲ್42 ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟುಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಬೆಳಗಾದ ಮೇಲೆ ಆತನು ಹೊರಟು ಅಡವಿಯ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು - ನೀನು ನಮ್ಮನ್ನು ಬಿಟ್ಟುಹೋಗಬೇಡ ಎಂದು ಆತನನ್ನು ತಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಬೆಳಗಾದ ಮೇಲೆ, ಯೇಸು ಏಕಾಂತ ಸ್ಥಳಕ್ಕೆ ಹೊರಟು ಹೋದರು. ಜನರು ಅವರನ್ನು ಹುಡುಕಿಕೊಂಡು ಅವರ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗಬಾರದೆಂದು ಅವರನ್ನು ತಡೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಸಕ್ಕಾಳ್ಚೆ, ಜೆಜು ಗಾಂವ್ ಸೊಡುನ್ ಎಕ್ ಕೊನ್-ಬಿ ನಸಲ್ಲ್ಯಾ ಜಾಗ್ಯಾರ್ ಗೆಲೊ. ತನ್ನಾ ಲೊಕಾ ತೆಕಾ ಹುಡ್ಕುಕ್ ಲಾಗಲ್ಲಿ, ಅನಿ ತೊ ತೆಂಕಾ ಗಾವಲ್ಲ್ಯಾ ತನ್ನಾ, ತೆನಿ ತೆಕಾ ಅಪ್ನಾಕ್ ಸೊಡುನ್ ಜಾವ್ಕ್ ದಿವ್ಕನ್ಯಾತ್. ಅಧ್ಯಾಯವನ್ನು ನೋಡಿ |