Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:43 - ಪರಿಶುದ್ದ ಬೈಬಲ್‌

43 ಆದರೆ ಯೇಸು ಅವರಿಗೆ, “ನಾನು ಬೇರೆ ಊರುಗಳವರಿಗೂ ಸಹ ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಬೇಕು. ಇದಕ್ಕಾಗಿಯೇ ನನ್ನನ್ನು ಕಳುಹಿಸಲಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದರೆ ಆತನು ಅವರಿಗೆ - ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಖರೆ ತೆನಿ ತೆಂಕಾ “ದುಸ್ರ್ಯಾ ಗಾಂವಾತ್ನಿಬಿ ಮಿಯಾ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುಕ್ ಪಾಜೆ, ಕಶ್ಶಾಕ್ ಮಟ್ಲ್ಯಾರ್, ತೆಚೆಸಾಟ್ನಿಚ್ ಮಾಕಾ ಧಾಡುನ್ ದಿಲ್ಲೆ ಹಾಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:43
12 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.


ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು.


ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು