ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.