Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:12 - ಪರಿಶುದ್ದ ಬೈಬಲ್‌

12 ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡ ಬಿದ್ದು - ಸ್ವಾಮೀ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಗ್ದಾ ಜೆಜು ಎಕ್ ಗಾಂವಾತ್ ಹೊತ್ತೊ. ಥೈ ಕುಸ್ಟ್ ರೊಗ್ ಹೊತ್ತೊ ಎಕ್ ಮಾನುಸ್ ಹೊತ್ತೊ. ತೆನಿ ಜೆಜುಕ್ ಬಗಟ್ಲ್ಯಾನ್, ಅನಿ ತೊ ಖಾಲ್ತಿ ಪಡ್ಲೊ, ಅನಿ ಜೆಜುಕ್ “ಗುರುಜಿ, ತಿಯಾ ಮನ್ ಕರ್ಲ್ಯಾರ್, ಮಾಕಾ ಪವಿತ್ರ್ ಕರುಕ್ ಹೊತಾ”, ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:12
27 ತಿಳಿವುಗಳ ಹೋಲಿಕೆ  

ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ಆತನಿಗೆ ವಂದನೆ ಸಲ್ಲಿಸಿದನು. (ಅವನು ಸಮಾರ್ಯದವನು, ಯೆಹೂದ್ಯನಲ್ಲ.)


ಯೇಸು ಮನೆಯೊಳಗೆ ಹೋದನು. ಕುರುಡರೂ ಆತನ ಸಂಗಡ ಹೋದರು. ಯೇಸು ಅವರಿಗೆ, “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ನಂಬುತ್ತೀರೋ?” ಎಂದು ಕೇಳಿದನು. ಕುರುಡರು, “ಹೌದು ಪ್ರಭುವೇ, ನಾವು ನಂಬುತ್ತೇವೆ” ಎಂದು ಉತ್ತರಕೊಟ್ಟರು.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ಯೇಸು ಬೆಥಾನಿಯಲ್ಲಿದ್ದಾಗ ಸಿಮೋನ ಎಂಬ ಕುಷ್ಠರೋಗಿಯ ಮನೆಯಲ್ಲಿದ್ದನು.


ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.


ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.


“ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


“ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.


ನಗರದ ಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು, “ನಾವು ಸಾಯುವುದನ್ನೇ ಕಾಯುತ್ತಾ ಕುಳಿತಿರುವುದೇಕೆ?


ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು. ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.


“ಹಸಿಯಾದ ಚರ್ಮವು ಬದಲಾಗಿ ಬಿಳಿಯಾದರೆ, ಆಗ ಆ ವ್ಯಕ್ತಿ ಯಾಜಕನ ಬಳಿಗೆ ಬರಬೇಕು.


ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು