ಲೂಕ 5:18 - ಪರಿಶುದ್ದ ಬೈಬಲ್18 ಒಬ್ಬ ಪಾರ್ಶ್ವವಾಯು ರೋಗಿ ಅಲ್ಲಿದ್ದನು. ಒಂದು ಚಿಕ್ಕ ಹಾಸಿಗೆಯಲ್ಲಿ ಅವನನ್ನು ಕೆಲವು ಮಂದಿ ಗಂಡಸರು ಹೊತ್ತುಕೊಂಡು ಬಂದು ಯೇಸುವಿನ ಮುಂದೆ ಇಡಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗದವನನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು; ಆದರೆ ಅವನನ್ನು ಒಳಗೆ ತೆಗೆದುಕೊಂಡುಹೋಗಿ ಆತನ ಮುಂದೆ ಇಡಬೇಕೆಂದು ಪ್ರಯತ್ನಿಸಿದರೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಉಲ್ಲ್ಯಾ ಲೊಕಾನಿ ಎಕ್ ವಾರೆಮಾರಲ್ಲ್ಯಾ ಮಾನ್ಸಾಕ್ ತೆಚ್ಯಾ ಹಾತ್ರಾನಾ ಸಮೆತ್ ಘೆವ್ನ್ ಯೆಲ್ಯಾನಿ. ತೆನಿ ಜೆಜು ಹೊತ್ತ್ಯಾ ಘರಾತ್ ಗುಸುಕ್, ಅನಿ ತೆಕಾ ಜೆಜುಚ್ಯಾ ಇದ್ರಾಕ್ ನ್ಹೆವ್ನ್ ಥವ್ಕ್ ಬಗಟ್ಲ್ಯಾನಿ, ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.