Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:24 - ಪರಿಶುದ್ದ ಬೈಬಲ್‌

24 ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯ ಕಡೆ ನೋಡಿ, “ ‘ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,’ ಎಂದು ನಿನಗೆ ಆಜ್ಞಾಪಿಸುತ್ತೇನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗದವನನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಜಾಲ್ಯಾರ್, ಮಾನ್ಸಾಚ್ಯಾ ಲೆಕಾಕ್ ಹ್ಯಾ ಜಗಾತ್ ಪಾಪ್ ಮಾಪಿ ಕರ್‍ತಲೊ ಅದಿಕಾರ್‍ಬಿ ಹಾಯ್, ಮನುನ್ ಮಿಯಾ ತುಮ್ಕಾ ದಾಕ್ವುನ್ ದಿತಾ. ಮನುನ್ ತ್ಯಾ ವಾರೆಮಾರಲ್ಲ್ಯಾಕ್, ತೆನಿ “ಮಿಯಾ ಸಾಂಗ್ತಾ ಉಟ್, ಘೆ ತುಜೆ ಹಾತ್ರಾನ್, ಅನಿ ಘರಾಕ್ ಚಲ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:24
26 ತಿಳಿವುಗಳ ಹೋಲಿಕೆ  

ಆ ದೀಪಸ್ತಂಭಗಳ ಮಧ್ಯದಲ್ಲಿ “ಮನುಷ್ಯಕುಮಾರ”ನಂತೆ ಇರುವಾತನನ್ನು ನಾನು ನೋಡಿದೆನು. ಆತನು ಉದ್ದನೆಯ ನಿಲುವಂಗಿಯನ್ನು ಧರಿಸಿದ್ದನು; ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು.


ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.


ಬಳಿಕ ಯೇಸು ಗಟ್ಟಿಯಾದ ಧ್ವನಿಯಿಂದ, “ಲಾಜರನೇ, ಹೊರಗೆ ಬಾ!” ಎಂದು ಕರೆದನು.


ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.


ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.


ಆದರೆ ಯೇಸು ಆಕೆಯ ಕೈಯನ್ನು ಹಿಡಿದು, “ಮಗು, ಎದ್ದೇಳು!” ಎಂದನು.


ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.


ಯೇಸು, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸುಂಟು. ನಿನಗೆ ಗುಣವಾಗಲಿ!” ಎಂದು ಹೇಳಿ ಅವನನ್ನು ಮುಟ್ಟಿದನು. ಕೂಡಲೆ ಅವನಿಗೆ ಗುಣವಾಯಿತು.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.


“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.


ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.


ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.


“ನನಗಾದ ರಾತ್ರಿಯ ದರ್ಶನದಲ್ಲಿ, ನನ್ನ ಎದುರಿಗೆ ಮನುಷ್ಯಕುಮಾರನಂತಿರುವವನನ್ನು ಕಂಡೆ. ಆತನು ಆಕಾಶದಲ್ಲಿ ಮೇಘಗಳ ಮೇಲೆ ಬರುತ್ತಿದ್ದನು. ಅವನು ಆ ಪುರಾತನ ರಾಜನ ಸಮೀಪಕ್ಕೆ ಬಂದನು; ಅವನನ್ನು ಆ ಮಹಾವೃದ್ಧನ ಸನ್ನಿಧಿಗೆ ತರಲಾಯಿತು.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ಒಬ್ಬ ಪಾರ್ಶ್ವವಾಯು ರೋಗಿ ಅಲ್ಲಿದ್ದನು. ಒಂದು ಚಿಕ್ಕ ಹಾಸಿಗೆಯಲ್ಲಿ ಅವನನ್ನು ಕೆಲವು ಮಂದಿ ಗಂಡಸರು ಹೊತ್ತುಕೊಂಡು ಬಂದು ಯೇಸುವಿನ ಮುಂದೆ ಇಡಲು ಪ್ರಯತ್ನಿಸಿದರು.


ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಪಾರ್ಶ್ವವಾಯು ರೋಗಿಗೆ ಹೇಳುವುದೋ? ಅಥವಾ ‘ಎದ್ದುನಿಂತು ನಡೆ’ ಎನ್ನುವುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು