Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:27 - ಪರಿಶುದ್ದ ಬೈಬಲ್‌

27 ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅನಂತರ ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇದಾದ ಮೇಲೆ ಆತನು ಹೊರಟು ಸುಂಕಕ್ಕೆ ಕೂತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹೆ ಹೊಲ್ಲ್ಯಾ ಮಾನಾ, ಜೆಜು ಬಾಯ್ರ್ ಗೆಲೊ, ಅನಿ ಲೆವಿ ಮನ್ತಲೊ ತೆರ್‍ಗಿ ವಸುಲ್ ಕರುಕ್ ಅಪ್ನಾಚ್ಯಾ ಜಾಗ್ಯಾರ್ ಬಸಲ್ಲೊ ತೆನಿ ಬಗಟ್ಲ್ಯಾನ್. ಜೆಜುನ್ ತೆಕಾ “ಮಾಜ್ಯಾ ಫಾಟ್ನಾ ಯೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:27
11 ತಿಳಿವುಗಳ ಹೋಲಿಕೆ  

ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ದೇಶಾಭಿಮಾನಿಯಾದ ಸೀಮೋನ


ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,


ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.


ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಿಕೊಳ್ಳಲಿ. ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು