7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಪಾಲುಗಾರರಿಗೆ - ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು ಅವು ಮುಳುಗುವ ಹಾಗಾದವು.
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
“ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಆ ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು.