ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.
ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.
ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.
ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.