Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:2 - ಪರಿಶುದ್ದ ಬೈಬಲ್‌

2 ಕೆಲವು ಫರಿಸಾಯರು, “ನೀವು ಸಬ್ಬತ್‌ದಿನದಲ್ಲಿ ಹೀಗೆ ಮಾಡುವುದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಫರಿಸಾಯರಲ್ಲಿ ಕೆಲವರು - ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಫರಿಸಾಯರಲ್ಲಿ ಕೆಲವರು ಅವರಿಗೆ, “ಸಬ್ಬತ್ ದಿನದಲ್ಲಿ ಮೋಶೆಯ ನಿಯಮಕ್ಕೆ ವಿರುದ್ಧವಾಗಿರುವದನ್ನು ನೀವು ಏಕೆ ಮಾಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಉಲ್ಲ್ಯಾ ಫಾರಿಜೆವಾನಿ “ಸಬ್ಬತಾಚ್ಯಾ ದಿಸಿ ಕರುಚೆ ನ್ಹಯ್ ಮನುನ್ ಅಮ್ಚೊ ಖಾಯ್ದೊ ಸಾಂಗಲ್ಲೆ ತುಮಿ ಕಶ್ಯಾಕ್ ಕರುಕ್ ಲಾಗ್ಲ್ಯಾಶಿ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:2
14 ತಿಳಿವುಗಳ ಹೋಲಿಕೆ  

ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.


ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.


ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್‌ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.


ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.


ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


“ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು.


ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.


“ಸ್ವಲ್ಪಕಾಲದವರೆಗೆ ತನ್ನ ಪಶುವನ್ನು ಪೋಷಿಸಬೇಕೆಂದು ತನ್ನ ನೆರೆಯವನನ್ನು ಕೇಳಿಕೊಳ್ಳಬಹುದು. ಈ ಪಶುವು ಕತ್ತೆಯಾಗಿರಬಹುದು, ಎತ್ತಾಗಿರಬಹುದು, ಕುರಿಯಾಗಿರಬಹುದು ಅಥವಾ ಯಾವುದೇ ಪಶುವಾಗಿರಬಹುದು. ಆದರೆ ಅದು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅಥವಾ ಕಳುವಾದರೆ,


“ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು