ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
“ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.
“ಬಳಿಕ ಒಂದು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ಬಹಳ ಕಠಿಣ ಮನುಷ್ಯನು ಎಂದು ನಾನು ಬಲ್ಲೆ. ನೀನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನು.