Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:48 - ಪರಿಶುದ್ದ ಬೈಬಲ್‌

48 ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅವನು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಬಡಿದಾಗ್ಯೂ ಅದು ಚೆನ್ನಾಗಿ ಕಟ್ಟಿದ್ದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತೊ ಎಕ್ ಘರ್ ಭಾಂದ್ತಲ್ಯಾ ಮಾನ್ಸಾ ಸರ್ಕೊ ತೊ ಅಪ್ನಾಚ್ಯಾ ಘರಾಚಿ ಪಾಯಾ ಖೊಲ್ ಖಂಡ್ತಾ ಅನಿ ಗುಂಡ್ಯಾ ವರ್‍ತಿ ಪಾಯಾ ಭರ್‍ತಾ. ನ್ಹಯ್ ಭರುನ್ ಯೆತಾ, ಅನಿ ಪಾನಿ ತ್ಯಾ ಘರಾಕ್ ಯೆವ್ನ್ ಮಾರ್‍ತಾ ಖರೆ ತೆ ಘರ್ ಹಾಲಿನಾ,ಕಶ್ಯಾಕ್ ಮಟ್ಲ್ಯಾರ್ ತೆ ಘರ್ ಘಟ್ಮುಟ್ ಗುಂಡ್ಯಾಚ್ಯಾ ವರ್‍ತಿ ಭಾಂದಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:48
37 ತಿಳಿವುಗಳ ಹೋಲಿಕೆ  

ಆತನು ನನಗೆ ಬಂಡೆಯೂ ರಕ್ಷಣೆಯೂ ಕೋಟೆಯೂ ಆಗಿದ್ದಾನೆ. ನಾನೆಂದಿಗೂ ಕದಲೆನು.


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.


ಯೆಹೋವನ ಹೊರತು ಬೇರೆ ದೇವರಿಲ್ಲ. ನಮ್ಮ ದೇವರ ಹೊರತು ಬೇರೆ ಬಂಡೆಯಿಲ್ಲ.


ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.


ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಗೆ ಸ್ತೋತ್ರವಾಗಲಿ. ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾದಾತನಿಗೆ ಸ್ತುತಿಯುಂಟಾಗಲಿ.


ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.


ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು.


ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ! ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.


ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು


ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.


ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.


ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು.


“ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು