Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:49 - ಪರಿಶುದ್ದ ಬೈಬಲ್‌

49 “ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ನೆಲದ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಬಡಿಯಿತು; ಬಡಿದ ಕೂಡಲೆ ಅದು ಕುಸಿದುಬಿದ್ದು ಪೂರಾ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಖರೆ ಮಿಯಾ ಸಾಂಗಟಲ್ಲ್ಯಾ ಗೊಸ್ಟಿಯಾ ಆಯ್ಕುನ್ ತೆಚೆ ಸಾರ್ಕೆ ಚಲಿನಸಲ್ಲೊ ಪಾಯಾ ಭರಿನಸ್ತಾನಾ ಮಾಟಿ ವರ್‍ತಿ ಘರ್ ಭಾಂದ್ತಲ್ಯಾ ಮಾನ್ಸಾ ಬಾಸೆನ್,ನ್ಹಯ್ ಭರುನ್ ಪಾನಿ ಯೆತಾ ಅನಿ ತ್ಯಾ ಘರಾಕ್ ಮಾರ್‍ತಾ ಅನಿ ತೆ ಘರ್ ಕೊಸ್ಳುನ್ ಪಡುನ್ ಜಾತಾ ಅನಿ ಸಗ್ಳೆಚ್ ನಾಸ್ ಹೊವ್ನ್ ಜಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:49
30 ತಿಳಿವುಗಳ ಹೋಲಿಕೆ  

ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.


ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೋ ಇದ್ದಕ್ಕಿದ್ದಂತೆ ಹಾಳಾಗುವನು.


ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


“ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!


“ನನ್ನನ್ನು ಸ್ವಾಮೀ, ಸ್ವಾಮೀ, ಎಂದು ಕರೆದು ನಾನು ಹೇಳುವುದನ್ನು ನಡಿಸದೆ ಇರುವುದೇಕೆ?


ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.


ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.


ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.


ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.


ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.


ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.


“ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ.


ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.


ಯೇಸುವು ಜನರಿಗೆ ಈ ಸಂಗತಿಗಳೆಲ್ಲವನ್ನು ಹೇಳಿ ಮುಗಿಸಿದ ನಂತರ ಕಪೆರ್ನೌಮಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು