ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.
ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್‌ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು.
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.