ಲೂಕ 7:20 - ಪರಿಶುದ್ದ ಬೈಬಲ್20 ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ‘ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?’ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ಶಿಷ್ಯರು ಯೇಸುವಿನ ಬಳಿಗೆ ಬಂದು, “ಬರಬೇಕಾದವರು ನೀವೋ ಅಥವಾ ನಾವು ಬೇರೊಬ್ಬರನ್ನು ಎದುರು ನೋಡಬೇಕೊ ಎಂದು ವಿಚಾರಿಸಲು ಸ್ನಾನಿಕ ಯೊವಾನ್ನ ನಮ್ಮನ್ನು ತಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಆತನ ಬಳಿಗೆ ಬಂದು - ಬರಬೇಕಾದವನು ನೀನೋ, ನಾವು ಮತ್ತೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳುವದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವರು ನೀವೋ? ಇಲ್ಲವೆ ನಾವು ಬೇರೊಬ್ಬರಿಗಾಗಿ ಎದುರು ನೋಡಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕ ಯೋಹಾನನು ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತೆನಿ ಜೆಜುಕ್ಡೆ ಯೆವ್ನ್, “ಜುವಾಂವ್ ಬಾವ್ತಿಸಾನ್ ಅಮ್ಕಾ ಯೆತಲೊ ಹಾಯ್ ಮನುನ್ ಸಾಂಗಲ್ಲೊ ತಿಯಾಚ್ ಕಾಯ್, ಅನಿ ದುಸ್ರ್ಯಾಚಿ ವಾಟ್ ಬಗುಚಿ? ಮನುನ್ ಇಚಾರುನ್ ಸಾಂಗುನ್ ಧಾಡ್ಲ್ಯಾನಾಯ್” ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |