Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:22 - ಪರಿಶುದ್ದ ಬೈಬಲ್‌

22 ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ಕಣ್ಣು ಬರುತ್ತವೆ, ಕುಂಟರಿಗೆ ಕಾಲು ಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿ ಬರುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜುನ್ ಜುವಾಂವಾಚ್ಯಾ ಶಿಸಾಕ್ನಿ “ಜಾಂವಾ, ಅನಿ ಹಿತ್ತೆ ಬಗಟಲ್ಲೆ, ಅನಿ ಆಯ್ಕಲ್ಲೆ, ಜುವಾಂವಾಕ್ ಸಾಂಗಾ: ಕುಡ್ಡೆ ಬಗ್ತ್ಯಾತ್, ಸೊಟ್ಟೊ ಚಲ್ತಾ, ಕುಸ್ಟ್ ರೊಗ್ ಹೊತ್ತೆ ಪವಿತ್ರ್ ಹೊತ್ಯಾತ್, ಕಿಂವ್ಡೆ ಆಯಿಕ್ತ್ಯಾತ್, ಮರಲ್ಲೆ ಝಿತ್ತೆ ಹೊತ್ಯಾತ್, ಅನಿ ಗರಿಬಾಕ್ನಿ ಬರಿ ಖಬರ್ ಸಾಂಗುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:22
31 ತಿಳಿವುಗಳ ಹೋಲಿಕೆ  

“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಕೆಲವು ಮಂದಿ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಯೇಸುವಿನ ಬಳಿಗೆ ಬಂದರು. ಯೇಸು ಅವರನ್ನು ಗುಣಪಡಿಸಿದನು.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


“ಕಣ್ಣಿದ್ದೂ ಕುರುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ಕಿವಿಯಿದ್ದೂ ಕಿವುಡರಂತಿರುವ ಜನರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


ಯೆಹೋವನು ಕುರುಡರಿಗೆ ದೃಷ್ಟಿಕೊಡುವನು. ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು. ಯೆಹೋವನು ನೀತಿವಂತರನ್ನು ಪ್ರೀತಿಸುವನು.


ನಾನು ಕುರುಡನಿಗೆ ಕಣ್ಣಾಗಿಯೂ ಕುಂಟನಿಗೆ ಕಾಲಾಗಿಯೂ ಇದ್ದೆನು.


ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.


ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಸಂಶಯಪಡದೆ ನನ್ನನ್ನು ಸ್ವೀಕರಿಸಿಕೊಳ್ಳುವವನೇ ಧನ್ಯನು!” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು