Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:26 - ಪರಿಶುದ್ದ ಬೈಬಲ್‌

26 ನಿಜವಾಗಿಯೂ, ನೀವು ಏನನ್ನು ನೋಡಲು ಹೊರಗೆ ಹೋದಿರಿ? ಪ್ರವಾದಿಯನ್ನೋ? ಹೌದು. ನಾನು ನಿಮಗೆ ಹೇಳುವುದೇನೆಂದರೆ, ಯೋಹಾನನು ಪ್ರವಾದಿಗಿಂತಲೂ ಶ್ರೇಷ್ಠನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹಾಗಾದರೆ ನೀವು ಇನ್ನೇನನ್ನು ನೋಡಲು ಹೋದಿರಿ? ಪ್ರವಾದಿಯನ್ನೇ? ಹೌದು, ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ, ಎಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಸಾಂಗಾ ಮಾಕಾ, ಕಾಯ್ ಬಗುಕ್ ತುಮಿ ಗೆಲ್ಲ್ಯಾಶಿ? ಎಕ್ ಪ್ರವಾದಿ? ಹೊಯ್, ರಾವ್ಕ್ ಫಿರೆ, ಖರೆ ತುಮಿ ಪ್ರವಾದ್ಯಾಚ್ಯಾನ್ಕಿ ಮೊಟೆ ಬಗಟ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:26
8 ತಿಳಿವುಗಳ ಹೋಲಿಕೆ  

‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.


“ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.


ನೀವು ಏನನ್ನು ನೋಡಲು ಹೊರಗೆ ಹೋದಿರಿ? ನಯವಾದ ಉಡುಪನ್ನು ಧರಿಸಿರುವ ಮನುಷ್ಯನನ್ನೋ? ಇಲ್ಲ. ನಯವಾದ ಮತ್ತು ಚಂದವಾದ ಉಡುಪನ್ನು ಧರಿಸಿದವರು ಅರಮನೆಗಳಲ್ಲಿ ವಾಸಮಾಡುತ್ತಾರೆ.


‘ಇಗೋ! ನಾನು (ದೇವರು) ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು’ ಎಂದು ಯೋಹಾನನ ಕುರಿತು ಬರೆದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು