Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:28 - ಪರಿಶುದ್ದ ಬೈಬಲ್‌

28 ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ದೊಡ್ಡವನು ಒಬ್ಬನೂ ಇಲ್ಲ; ಆದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಮಿಯಾ ತುಮ್ಕಾ ಸಾಂಗ್ತಾ, ಹ್ಯಾ ಜಗಾತ್ ಜಿವನ್ ಕರಲ್ಲ್ಯಾತ್ನಿ ಜುವಾಂವ್ ಸಗ್ಳ್ಯಾಂಚ್ಯಾನ್ಕಿ ಮೊಟೊ. ಖರೆ ದೆವಾಚ್ಯಾ ರಾಜಾತ್ಲೊ ಎಗ್ದಮ್ ಬಾರಿಕ್ಲೊಬಿ ಜುವಾಂವಾನ್ಕಿ ಮೊಟೊ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:28
13 ತಿಳಿವುಗಳ ಹೋಲಿಕೆ  

“ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.


ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.


‘ಇಗೋ! ನಾನು (ದೇವರು) ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು’ ಎಂದು ಯೋಹಾನನ ಕುರಿತು ಬರೆದಿದೆ.


ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು