Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:32 - ಪರಿಶುದ್ದ ಬೈಬಲ್‌

32 ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಿಗೆ ಹೋಲುತ್ತಾರೆ. ಒಂದು ಗುಂಪಿನ ಮಕ್ಕಳು ಇನ್ನೊಂದು ಗುಂಪಿನ ಮಕ್ಕಳನ್ನು ಕರೆದು, ‘ನಾವು ನಿಮಗೋಸ್ಕರ ವಾದ್ಯಬಾರಿಸಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ದುಃಖದ ಹಾಡನ್ನು ಹಾಡಿದೆವು, ಆದರೆ ನೀವು ಅಳಲಿಲ್ಲ’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ.’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪೇಟೆಯಲ್ಲಿ ಕೂತುಕೊಂಡು - ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಹುಡುಗರನ್ನು ಹೋಲುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಸಂತೆಯಲ್ಲಿ ಕುಳಿತುಕೊಂಡು ಒಬ್ಬರನ್ನೊಬ್ಬರು ಕರೆಯುತ್ತಾ: “ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ, ನಾವು ನಿಮಗಾಗಿ ಶೋಕಗೀತೆ ಹಾಡಿದೆವು, ನೀವು ಅಳಲಿಲ್ಲ,’ ಎಂದು ಹೇಳುವ ಮಕ್ಕಳಿಗೆ ಹೋಲಿಕೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೆನಿ, ಬಾಜಾರಾತ್ ಬಸಲ್ಲ್ಯಾ ಪೊರಾಂಚ್ಯಾ ಬಾಸೆನ್, ಎಕ್ ಪೊರಾಂಚೊ ಗುಂಪೊ, ಅನಿಎಕ್ ಗುಂಪ್ಯಾಕ್ ಬಲ್ವುನ್ಗೆತ್ “ಅಮಿ ತುಮ್ಚ್ಯಾಸಾಟ್ನಿ ಲಗ್ನಾಚೆ ವಾಜಾಪ್ ವಾಜ್ವುಲಾವ್, ಖರೆ ತುಮಿ ನಾಚುಕನ್ಯಾಶಿ! ಅಮಿ ಮಾಟಿ ದಿತಲ್ಯಾ ಗಿತಾ ಮಟ್ಲಾಂವ್, ಖರೆ ತುಮಿ ರಡುಕ್ನ್ಯಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:32
9 ತಿಳಿವುಗಳ ಹೋಲಿಕೆ  

ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.


ನಗರದ ತುಂಬಾ ಬಾಲಬಾಲೆಯರು ಆಡುವರು.”


“ಸುಮಾರು ಒಂಭತ್ತು ಗಂಟೆಗೆ ಯಜಮಾನನು ಪೇಟೆಯ ಸ್ಥಳಕ್ಕೆ ಹೋದನು. ಏನೂ ಕೆಲಸವಿಲ್ಲದೆ ಸುಮ್ಮನೆ ನಿಂತಿದ್ದ ಕೆಲವರನ್ನು ಅವನು ಅಲ್ಲಿ ಕಂಡನು.


“ಈ ಕಾಲದ ಜನರ ಬಗ್ಗೆ ನಾನು ಏನು ಹೇಳಲಿ? ನಾನು ಅವರನ್ನು ಯಾವುದಕ್ಕೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?


ಸ್ನಾನಿಕ ಯೋಹಾನನು ಬಂದನು. ಅವನು ಇತರರಂತೆ ತಿನ್ನಲಿಲ್ಲ ಅಥವಾ ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು