38 ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.
38 ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
38 ಹಿಂದೆ ಆತನ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತ್ಯಾವಮಾಡಿ ತನ್ನ ತಲೇಕೂದಲಿನಿಂದ ಒರಸಿ ಅವುಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.
ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.
ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.
ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ, ಸುಗಂಧದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು.
ಆ ಊರಿನಲ್ಲಿ ಪಾಪಿಷ್ಠಳಾದ ಒಬ್ಬ ಸ್ತ್ರೀ ಇದ್ದಳು. ಯೇಸುವು ಫರಿಸಾಯನ ಮನೆಯಲ್ಲಿ ಊಟಮಾಡುತ್ತಿದ್ದಾನೆಂದು ಆಕೆಗೆ ತಿಳಿಯಿತು. ಆದ್ದರಿಂದ ಆಕೆ ಭರಣಿಯಲ್ಲಿ ಸ್ವಲ್ಪ ಪರಿಮಳತೈಲವನ್ನು ತೆಗೆದುಕೊಂಡು ಬಂದಳು.
ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.