Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:42 - ಪರಿಶುದ್ದ ಬೈಬಲ್‌

42 ಅವರಲ್ಲಿ ಹಣವಿರಲಿಲ್ಲ. ಆದ್ದರಿಂದ ಅವರು ಸಾಲ ತೀರಿಸಲು ಆಗಲಿಲ್ಲ. ಸಾಹುಕಾರನು ಅವರಿಗೆ, ‘ನೀವು ಸಾಲ ತೀರಿಸಬೇಕಾಗಿಲ್ಲ’ ಎಂದು ಹೇಳಿದನು. ಆ ಇಬ್ಬರಲ್ಲಿ ಯಾರು ಹೆಚ್ಚಾಗಿ ಸಾಹುಕಾರನನ್ನು ಪ್ರೀತಿಸುವರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ತೀರಿಸುವುದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಮನ್ನಾಮಾಡಿ ಬಿಟ್ಟನು. ಹಾಗಾದರೆ ಅವರಿಬ್ಬರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸುವನು?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ತೀರಿಸುವದಕ್ಕೆ ಅವರಿಗೆ ಗತಿಯಿಲ್ಲದ್ದರಿಂದ ಆ ಇಬ್ಬರಿಗೂ ಸಾಲವನ್ನು ಬಿಟ್ಟುಬಿಟ್ಟನು. ಹಾಗಾದರೆ ಅವರಲ್ಲಿ ಯಾವನು ಆ ಸಾಹುಕಾರನನ್ನು ಹೆಚ್ಚಾಗಿ ಪ್ರೀತಿಸಾನು ಎಂದು ಕೇಳಿದ್ದಕ್ಕೆ ಸೀಮೋನನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತೆಂಕಾ ದೊಗ್ಯಾಕ್ನಿಬಿ ತೆಂಚೆ ರಿನ್ ಫೆಡುಕ್ ಹೊವ್ಕ್ ನಾ. ತಸೆಮನುನ್ ತ್ಯಾ ರಿನ್ ದಿಲ್ಲ್ಯಾನ್, ತೆಂಚೆ ರಿನ್ ಸುಟ್ ಕರ್‍ಲ್ಯಾನ್. ತನ್ನಾ ಹ್ಯಾ ದೊಗ್ಯಾನಿತ್ಲೊ ಕೊನ್ ತೆಚೊ ಜಾಸ್ತಿಚೊ ಪ್ರೆಮ್ ಕರ್‍ತಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:42
23 ತಿಳಿವುಗಳ ಹೋಲಿಕೆ  

ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ.


ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು.


ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.


ಬಹುಕೋಪಗೊಂಡು ಅವನನ್ನು ಶಿಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸಿದನು. ಆ ಸೇವಕನು ತನ್ನ ಸಾಲವನ್ನೆಲ್ಲಾ ತೀರಿಸುವ ತನಕ ಸೆರೆಮನೆಯಲ್ಲಿ ಇರಬೇಕಾಯಿತು.


ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”


“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಆತನು ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸುವನು; ನಮ್ಮ ಕಾಯಿಲೆಗಳನ್ನೆಲ್ಲಾ ವಾಸಿಮಾಡುವನು.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸು.


ರಾಜನು ತನ್ನ ಸೇವಕನ ವಿಷಯದಲ್ಲಿ ದುಃಖಪಟ್ಟು ಅವನು ಕೊಡಬೇಕಾದ ಸಾಲವನ್ನು ಮನ್ನಿಸಿ ಅವನನ್ನು ಬಿಡುಗಡೆ ಮಾಡಿದನು.


ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು.


ಆಗ ಆ ಸ್ತ್ರೀಯು, “ದೇವರ ಜನರ ವಿರುದ್ಧವಾಗಿ ನೀನು ಈ ಕಾರ್ಯಗಳನ್ನು ಮಾಡಲು ಯೋಚಿಸಿರುವುದಾದರೂ ಏಕೆ? ಹೌದು, ನೀನು ಕೊಟ್ಟ ತೀರ್ಪಿನ ಮೂಲಕ ನೀನು ನನ್ನನ್ನು ತಪ್ಪಿತಸ್ಥನೆಂದು ತೋರಿಸಿ ಕೊಟ್ಟಿರುವೆ. ಏಕೆಂದರೆ ನೀನು ಬಲಾತ್ಕಾರದಿಂದ ಮನೆ ಬಿಡಿಸಿದ ಮಗನನ್ನು ಮನೆಗೆ ಕರೆದು ತಂದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು