Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:9 - ಪರಿಶುದ್ದ ಬೈಬಲ್‌

9 ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು ತನ್ನನ್ನು ಹಿಂಬಾಲಿಸುತ್ತಿದ್ದ ಜನರ ಕಡೆಗೆ ನೋಡಿ, “ಇಷ್ಟು ದೊಡ್ಡ ನಂಬಿಕೆಯಿರುವ ವ್ಯಕ್ತಿಯನ್ನು ನಾನು ಇಸ್ರೇಲಿನಲ್ಲಿಯೂ ನೋಡಲಿಲ್ಲ ಎಂದು ನಿಮಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ಹಿಂತಿರುಗಿ ನೋಡಿ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹೆ ಆಯ್ಕುನ್ ಜೆಜು ಅಜಾಪ್ ಹೊಲೊ; ತೊ ಫಾಟಿ ಪರತ್ಲೊ, ಅನಿ ಅಪ್ನಾಚ್ಯಾ ಫಾಟ್ನಾ ಯೆತಲ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಯಾ ತುಮ್ಕಾ ಸಾಂಗ್ತಾ “ಅಸ್ಲೊ ವಿಶ್ವಾಸ್ ಮಾಕಾ ಇಸ್ರಾಯೆಲಾತ್ ಖೈಬಿ ಗಾವುಕ್ನಾ!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:9
9 ತಿಳಿವುಗಳ ಹೋಲಿಕೆ  

ಆಗ ಯೇಸು, “ಅಮ್ಮಾ, ನಿನ್ನ ನಂಬಿಕೆ ದೊಡ್ಡದು. ನಿನ್ನ ಕೋರಿಕೆಯನ್ನು ನಾನು ಈಡೇರಿಸುತ್ತೇನೆ” ಎಂದನು. ಆ ಕ್ಷಣದಲ್ಲೇ ಆಕೆಯ ಮಗಳು ಗುಣವಾದಳು.


ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದನು.


ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.


ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.


ಆ ಅಧಿಕಾರಿಯು ಕಳುಹಿಸಿದ್ದ ಜನರು ಯೇಸುವಿನ ಬಳಿಯಿಂದ ಹಿಂತಿರುಗಿ ಹೋದಾಗ, ಆ ಸೇವಕನಿಗೆ ಆಗಲೇ ಗುಣವಾಗಿರುವುದನ್ನು ಕಂಡರು.


ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯಿಂದಲೇ ನಿನಗೆ ರಕ್ಷಣೆ ಆಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು