ಲೂಕ 8:10 - ಪರಿಶುದ್ದ ಬೈಬಲ್10 ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ‘ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತನ್ನಾ ಜೆಜುನ್ “ದೆವಾಚ್ಯಾ ರಾಜಾಚೊ ಘುಟಾಚಿ ಸಮ್ಜನ್ ತುಮ್ಕಾ ಎವ್ಡೆಚ್ ದಿಲ್ಲೆ ಹಾಯ್. ಖರೆ ದುಸ್ರ್ಯಾಕ್ನಿ ತೊ ಘುಟ್ ಕಾನಿಯಾಂಚ್ಯಾ ವೈನಾಚ್ ಸಾಂಗುನ್ ಹೊತಾ. ಕಶ್ಯಾಕ್ ಮಟ್ಲ್ಯಾರ್ ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ಆಯಿಕ್ತ್ಯಾತ್, ಖರೆ ತೆಂಕಾ ಕಾಯ್ಬಿ ಕಳಿನಾ”. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.