Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:12 - ಪರಿಶುದ್ದ ಬೈಬಲ್‌

12 ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ಆ ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು. ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆ ಹೊಂದಿಕೊಳ್ಳದಂತೆ, ಪಿಶಾಚನು ಬಂದು ಅವರ ಹೃದಯದೊಳಗಿಂದ, ಆ ವಾಕ್ಯವನ್ನು ತೆಗೆದುಬಿಡುತ್ತಾನೆ, ಇವರೇ ಆ ಬೀಜಗಳು ಬಿದ್ದ ಪಕ್ಕದ ದಾರಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ವಾಟೆಚ್ಯಾ ದಂಡೆಕ್ ಪಡಲ್ಲ್ಯಾ ಭ್ಹಿಂಯಾ ಮಟ್ಲ್ಯಾರ್ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್: ಖರೆ ಗಿರೊ ತೆಂಚ್ಯಾ ಮನಾತ್ನಾ ತ್ಯಾ ಗೊಸ್ಟಿಯಾ ಕಾಡುನ್ ಘೆವ್ನ್, ಅಶೆ ತೆಂಕಾ ವಿಶ್ವಾಸಾತ್ನಾ, ಅನಿ ಸುಟ್ಕಾ ಹೊತಲ್ಯಾತ್ನಾ ಧುರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:12
13 ತಿಳಿವುಗಳ ಹೋಲಿಕೆ  

ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಕೆಲವು ಜನರು ದೇವರ ವಾಕ್ಯವನ್ನು ಕೇಳುತ್ತಾರೆ. ಆದರೆ ಅವರಲ್ಲಿ ಬಿತ್ತಿದ ವಾಕ್ಯವನ್ನು ಸೈತಾನನು ಬಂದು ತೆಗೆದುಬಿಡುತ್ತಾನೆ. ಈ ಜನರೇ ದಾರಿಯ ಮಗ್ಗುಲಾಗಿದ್ದಾರೆ.


“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.


ಜ್ಞಾನವನ್ನು ಮತ್ತು ವಿವೇಕವನ್ನು ಪಡೆದುಕೋ! ನನ್ನ ಮಾತುಗಳನ್ನು ಮರೆಯಬೇಡ. ಯಾವಾಗಲೂ ನನ್ನ ಉಪದೇಶಗಳನ್ನು ಅನುಸರಿಸು.


ನಾನು ನಿಮಗೆ ಸಹಾಯ ಮಾಡುವುದಿಲ್ಲ; ಏಕೆಂದರೆ ನೀವೆಂದೂ ನನ್ನ ಜ್ಞಾನವನ್ನು ಬಯಸಲಿಲ್ಲ. ನೀವು ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿರ್ಧರಿಸಲಿಲ್ಲ.


“ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.


“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.


ಅವನು ಬೀಜ ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಬೀಜಗಳನ್ನೆಲ್ಲ ತಿಂದುಬಿಟ್ಟವು.


“ಈ ಸಾಮ್ಯದ ಅರ್ಥ ಹೀಗಿದೆ: ಬೀಜವು ದೇವರ ವಾಕ್ಯ.


ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು