Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:25 - ಪರಿಶುದ್ದ ಬೈಬಲ್‌

25 ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರಾದರೋ ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೇಸು ತಮ್ಮ ಶಿಷ್ಯರಿಗೆ, “ನಿಮ್ಮ ನಂಬಿಕೆ ಎಲ್ಲಿ?” ಎಂದರು. ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, “ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ತೆನಿ ಶಿಸಾಕ್ನಿ “ತುಮ್ಚೊ ವಿಶ್ವಾಸ್ ಖೈ ಗೆಲೊ?” ಮನುನ್ ಮಟ್ಲ್ಯಾನ್. ಖರೆ ತೆನಿ ಭಿಂಯಾಲೆ, ಅನಿ ಅಜಾಪ್ ಹೊಲೆ, ಅನಿ “ಹ್ಯೊ ಕಸ್ಲೊ ಮಾನುಸ್? ವಾರ್ಯಾಕ್ ಅನಿ ಲ್ಹಾಟಾಕ್ನಿ ತೊ ಹುಕುಮ್ ದಿತಾ ಅನಿ ತೆನಿ ಹೆನಿ ಸಾಂಗಟಲ್ಲೆ ಆಯಿಕ್ತ್ಯಾತ್ ಮನುನ್ ಅಪ್ನಾ-ಅಪ್ನಾಚ್ಯಾ ಮದ್ದಿಚ್” ಬೊಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:25
16 ತಿಳಿವುಗಳ ಹೋಲಿಕೆ  

ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?


ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.


ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.


ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!


ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.


ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.


ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!


ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಎಂದನು.


ಆ ದಿನ ಸಂಜೆ, ಯೇಸು ತನ್ನ ಶಿಷ್ಯರಿಗೆ “ನನ್ನೊಂದಿಗೆ ಬನ್ನಿ, ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು.


ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.


ಯೇಸು ಮತ್ತು ಆತನ ಶಿಷ್ಯರು ಗಲಿಲಾಯದಿಂದ ಸರೋವರವನ್ನು ದಾಟಿ, ಗೆರೆಸೇನರ ನಾಡಿಗೆ ಪ್ರಯಾಣ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು