ಲೂಕ 8:31 - ಪರಿಶುದ್ದ ಬೈಬಲ್31 ತಮ್ಮನ್ನು ಪಾತಾಳಕ್ಕೆ ಕಳುಹಿಸಕೂಡದೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆ ಪಿಶಾಚಿಗಳು, “ಪಾತಾಳಕ್ಕೆ ಹೋಗಿಬೀಳಿರೆಂದು ನಮಗೆ ಆಜ್ಞೆಮಾಡಬೇಡಿ,” ಎಂದು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆ ಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಗಿರ್‍ಯಾನಿ ಅಪ್ನಾಕ್ ಪಾತಾಳಾಕ್ ಧಾಡುನಕ್ಕೊ, ಮನುನ್ ಜೆಜುಕ್ಡೆ ಮಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.