32 ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು.
32 ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
32 ಸಮೀಪದಲ್ಲೇ, ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಿನಲ್ಲಿ ಮೇಯುತ್ತಿತ್ತು. ಆ ಹಂದಿಗಳೊಳಗೆ ಸೇರಿಕೊಳ್ಳಲು ತಮಗೆ ಅಪ್ಪಣೆಯಾಗಬೇಕೆಂದು ಆ ಪಿಶಾಚಿಗಳು ಯೇಸುವನ್ನು ಬೇಡಿಕೊಂಡವು. ಅವರು ಹಾಗೇ ಅಪ್ಪಣೆಮಾಡಿದರು.
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.
ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.
ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.
ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.
ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.
ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.
“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.