ಲೂಕ 8:35 - ಪರಿಶುದ್ದ ಬೈಬಲ್35 ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಜನರು ನಡೆದ ಸಂಗತಿಯನ್ನು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಹೆದರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಲೊಕಾ ಕಾಯ್ ಹೊಲೆ ಕಾಯ್ ಮನುನ್ ಬಗುಕ್ ಜೆಜು ಹೊತ್ತ್ಯಾಕ್ಡೆ ಯೆಲಿ.ತೆನಿ ಜೆಜುಕ್ಡೆ ಪಾವಲ್ಲ್ಯಾ ತನ್ನಾ ತೊ ಗಿರೊ ಸುಟುನ್ ಬರೊ ಹೊಲ್ಲೊ, ಮಾನುಸ್ ಬರೆ ಕಪ್ಡೆ ನೆಸುನ್, ಬರ್‍ಯಾ ಬುದ್ದಿನ್, ಜೆಜುಚ್ಯಾ ಪಾಂಯಾತ್ನಿ ಬಸಲ್ಲೊ ತೆನಿ ಬಗಟ್ಲ್ಯಾನಿ; ಹೆ ಬಗುನ್ ತೆನಿ ಭಿಂಯಾಲೆ. ಅಧ್ಯಾಯವನ್ನು ನೋಡಿ |
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.