ಲೂಕ 8:37 - ಪರಿಶುದ್ದ ಬೈಬಲ್37 ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತನ್ನಾ ತ್ಯಾ ಜಾಗ್ಯಾ ವೈಲಿ ಸಗ್ಳಿ ಲೊಕಾ ಜೆಜುಕ್ ಅಮ್ಚೆ ಗಾಂವ್ ಸೊಡುನ್ ಜಾ ಮನುಕ್‍ಲಾಲಿ, ಕಶ್ಯಾಕ್ ಮಟ್ಲ್ಯಾರ್, ತೆನಿ ಭಿಂಯಾವಲ್ಲ್ಯಾನಿ, ತಸೆ ಮನುನ್ ಜೆಜು ಢೊನಿತ್ ಚಡ್ಲೊ, ಅನಿ ಜಾವ್ಕಲಾಲೊ. ಅಧ್ಯಾಯವನ್ನು ನೋಡಿ |
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.