ಲೂಕ 8:38 - ಪರಿಶುದ್ದ ಬೈಬಲ್38 ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಅಪ್ನಾತ್ನಾ ಗಿರೆ ಗೆಲ್ಲೊ ಮಾನುಸ್ ಯೆಲೊ, ಅನಿ “ಮಿಯಾಬಿ ತುಜ್ಯಾ ವಾಂಗ್ಡಾ ಯೆತಾ” ಮನುನ್ ಜೆಜುಕ್ಡೆ ಮಾಗುಲಾಲೊ. ಜೆಜುನ್ ತೆಕಾ ಪರ್ತುನ್ ಧಾಡ್ಲ್ಯಾನ್, ಅಧ್ಯಾಯವನ್ನು ನೋಡಿ |
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.