Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:40 - ಪರಿಶುದ್ದ ಬೈಬಲ್‌

40 ಯೇಸು ಗಲಿಲಾಯಕ್ಕೆ ಹಿಂತಿರುಗಿದಾಗ ಜನರು ಆತನನ್ನು ಸ್ವಾಗತಿಸಿದರು. ಪ್ರತಿಯೊಬ್ಬರೂ ಆತನಿಗಾಗಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಯೇಸುಸ್ವಾಮಿ ಹಿಂದಿರುಗಿ ಬಂದುದೇ, ದಡದಲ್ಲಿ ಎದುರುನೋಡುತ್ತಿದ್ದ ಜನಸಮೂಹವು ಅವರನ್ನು ಸ್ವಾಗತಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನನ್ನು ಕಾದುಕೊಂಡಿದ್ದು ಸಂತೋಷದಿಂದ ಸ್ವೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೇಸು ಹಿಂತಿರುಗಿ ಬಂದಾಗ ಅವರ ಬರುವಿಕೆಯನ್ನು ಎದುರುನೋಡುತ್ತಿದ್ದ ಜನರೆಲ್ಲರೂ ಅವರನ್ನು ಸ್ವಾಗತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜೆಜು ಸಮುಂದರಾಚ್ಯಾ ಅನಿಎಕ್ ದಂಡೆಕ್ ಪರ್ತುನ್ ಯೆಲ್ಲ್ಯಾ ತನ್ನಾ, ಲೊಕಾನಿ ತೆಕಾ ಸ್ವಾಗತ್ ಕರ್‍ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೆನಿ ತೆಚಿ ವಾಟ್ ರಾಕುನ್ಗೆತ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:40
12 ತಿಳಿವುಗಳ ಹೋಲಿಕೆ  

ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು.


ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು.


ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.


ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.


ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.


ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.


ಆಗ ಜಕ್ಕಾಯನು ಬೇಗನೆ ಕೆಳಗಿಳಿದು ಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.


ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.


ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.


ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ.


ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು