ಲೂಕ 8:41 - ಪರಿಶುದ್ದ ಬೈಬಲ್41 ಯಾಯಿರನೆಂಬ ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದನು. ಅವನು ಸಭಾಮಂದಿರದ ಅಧಿಕಾರಿಯಾಗಿದ್ದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941-42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41-42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಬಿದ್ದನು. ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ಸಾಯುವವಳಾಗಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಆತನು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಆತನನ್ನು ಇರಿಕಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ತನ್ನಾ ಜಾಯಿರ್ ಮನ್ತಲೊ ಎಕ್ ಮಾನುಸ್ ಯೆಲೊ, ತೊ ಥೈತ್ಲ್ಯಾ ಸಿನಾಗೊಗಾಚೊ ಅದಿಕಾರಿ ಹೊವ್ನ್ ಹೊತ್ತೊ; ತೊ ಎಗ್ದಮ್ ಜೆಜುಚ್ಯಾ ಪಾಂಯಾತ್ ಪಡ್ಲೊ, ಅನಿ ಜೆಜುಕ್ ಅಪ್ನಾಚ್ಯಾ ಘರಾಕ್ಡೆ ಯೆ, ಮನುನ್ ಮಾಗುಕ್‍ಲಾಲೊ. ಅಧ್ಯಾಯವನ್ನು ನೋಡಿ |