ಲೂಕ 8:47 - ಪರಿಶುದ್ದ ಬೈಬಲ್47 ಇನ್ನು ತಾನು ಅಡಗಿಕೊಂಡಿರಲು ಸಾಧ್ಯವಿಲ್ಲವೆಂದು ತಿಳಿದುಕೊಂಡ ಆ ಸ್ತ್ರೀಯು ನಡುಗುತ್ತಾ ಆತನ ಮುಂದೆ ಬಂದು ಅಡ್ಡಬಿದ್ದು ತಾನು ಮುಟ್ಟಿದ್ದಕ್ಕೆ ಕಾರಣವನ್ನು ಎಲ್ಲರ ಎದುರಿನಲ್ಲಿ ತಿಳಿಸಿದಳು. ಅಲ್ಲದೆ ಆತನನ್ನು ಮುಟ್ಟಿದಾಕ್ಷಣವೇ ತನಗೆ ವಾಸಿಯಾಯಿತೆಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಆಗ ಆ ಮಹಿಳೆ ತಾನು ಮಾಡಿದ್ದನ್ನು ಇನ್ನು ಮುಚ್ಚಿಡಲು ಸಾಧ್ಯವಿಲ್ಲವೆಂದು ಅರಿತು, ನಡುಗುತ್ತಾ ಬಂದು, ಯೇಸುವಿಗೆ ಅಡ್ಡಬಿದ್ದಳು. ತಾನು ಮುಟ್ಟಿದ್ದಕ್ಕೆಕಾರಣವನ್ನೂ ತಾನು ತಕ್ಷಣ ಗುಣಹೊಂದಿದ್ದನ್ನೂ ಎಲ್ಲರ ಮುಂದೆ ಬಹಿರಂಗಪಡಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆ ಹೆಂಗಸು ತಾನು ಮರೆಯಾಗಿಲ್ಲವೆಂತ ತಿಳಿದು ನಡುಗುತ್ತಾ ಬಂದು ಆತನಿಗೆ ಅಡ್ಡ ಬಿದ್ದು ತಾನು ಇಂಥ ಕಾರಣದಿಂದ ಈತನನ್ನು ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂತಲೂ ಎಲ್ಲಾ ಜನರ ಮುಂದೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆ ಸ್ತ್ರೀಯು, ತಾನು ಇನ್ನು ಮರೆಮಾಡಲು ಸಾಧ್ಯವಿಲ್ಲವೆಂದು ತಿಳಿದು, ನಡುಗುತ್ತಾ ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಯಾವ ಕಾರಣದಿಂದ ಆಕೆಯು ಯೇಸುವನ್ನು ಮುಟ್ಟಿದಳೆಂದೂ ಹೇಗೆ ತಾನು ಕೂಡಲೇ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಅವರಿಗೆ ತಿಳಿಯಪಡಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ತನ್ನಾ ತಿ ಬಾಯ್ಕೊಮನುಸ್ ಅತ್ತಾ ಅನಿ ಮಾಕಾ ನಿಪುನ್ ರಾವ್ಕ್ ಹೊಯ್ನಾ ಮನುನ್, ಕಾಪುನ್ಗೆತ್ ಜೆಜುಕ್ಡೆ ಯೆಲಿ, ಅನಿ ತೆಚ್ಯಾ ಪಾಂಯಾತ್ ಪಡ್ಲಿ.ಥೈ ಸಗ್ಳ್ಯಾಂಚ್ಯಾ ಇದ್ರಾಕ್ ತೆನಿ, ಅಪ್ನಿ ಜೆಜುಕ್ ಕಶ್ಯಾಕ್ ಹಾತ್ ಲಾವ್ಲಿನ್, ಅನಿ ಅಪ್ನಿ ಕಶಿ ತಾಬೊಡ್ತೊಬ್ ಆರಾಮ್ ಹೊಲೊ ಮನುನ್ ಸಾಂಗ್ಲಿನ್. ಅಧ್ಯಾಯವನ್ನು ನೋಡಿ |