Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:49 - ಪರಿಶುದ್ದ ಬೈಬಲ್‌

49 ಯೇಸು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿರದ ಅಧಿಕಾರಿಯ (ಯಾಯಿರನ) ಮನೆಯಿಂದ ಒಬ್ಬ ವ್ಯಕ್ತಿ ಬಂದು, “ನಿನ್ನ ಮಗಳು ಸತ್ತುಹೋದಳು! ಈಗ ಬೋಧಕನಿಗೆ (ಯೇಸುವಿಗೆ) ತೊಂದರೆ ಕೊಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಯೇಸುಸ್ವಾಮಿ ಇನ್ನೂ ಮಾತನಾಡುತ್ತಾ ಇರುವಾಗಲೇ ಒಬ್ಬನು ಯಾಯೀರನ ಮನೆಯಿಂದ ಬಂದು ಆ ಯಾಯಿರನಿಗೆ, “ನಿಮ್ಮ ಮಗಳು ತೀರಿಹೋದಳು. ಇನ್ನು ಗುರುವಿಗೆ ತೊಂದರೆಕೊಡಬೇಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು - ನಿನ್ನ ಮಗಳು ಸತ್ತಳು; ಗುರುವಿಗೆ ತೊಂದರೆ ಕೊಡಬೇಡ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಒಬ್ಬನು ಬಂದು ಅಧಿಕಾರಿಗೆ, “ನಿನ್ನ ಮಗಳು ತೀರಿಹೋದಳು, ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಜೆಜು ಅಶೆ ಸಾಂಗ್ತಾ-ಸಾಂಗ್ತಾನಾಚ್, ತ್ಯಾ ಅದಿಕಾರ್‍ಯಾ ಘರಾತ್ನಾ ಎಕ್ಲೊ ಖಬರ್ ಘೆವ್ನ್ ಯೆಲೊ, ಅನಿ ಜಾಯಿರಾಕ್ “ತುಜಿ ಲೆಕ್ ಮರ್ಲಿ, ಅನಿಬಿ ತಿಯಾ ಗುರುಜಿಕ್ ತರಾಸ್ ದಿತಲೆ ನಕ್ಕೊ” ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:49
9 ತಿಳಿವುಗಳ ಹೋಲಿಕೆ  

ಆದ್ದರಿಂದ ಯೇಸು ಅವರ ಜೊತೆ ಹೊರಟನು. ಯೇಸು ಮನೆಯ ಹತ್ತಿರ ಬರುತ್ತಿರುವಾಗ, ಆ ಅಧಿಕಾರಿಯು ಸ್ನೇಹಿತರನ್ನು, “ಪ್ರಭುವೇ, ನೀನು ನನ್ನ ಮನೆಗೆ ಬರುವಷ್ಟು ನಾನು ಯೋಗ್ಯನಲ್ಲ.


ಅದಕ್ಕೆ ಆಹಾಜನು, “ಇದು ಸತ್ಯವೆಂಬುದಕ್ಕೆ ನಾನು ಯಾವ ಗುರುತನ್ನೂ ಕೇಳಲಾರೆ. ನಾನು ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದು ಹೇಳಿದನು.


ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ.


ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.


ಆದರೆ ಈ ಘಟನೆಗೆ ಕಾರಣವನ್ನು ತಿಳಿದಿದ್ದ ಯೇಸು ತನ್ನ ಶಿಷ್ಯರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತೀರಿ? ಆಕೆಯು ನನಗೆ ಬಹಳ ಒಳ್ಳೆಯ ಕಾರ್ಯವನ್ನು ಮಾಡಿದಳು.


ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು