ಲೂಕ 8:52 - ಪರಿಶುದ್ದ ಬೈಬಲ್52 ಸತ್ತುಹೋದ ಆ ಬಾಲಕಿಗಾಗಿ ಜನರೆಲ್ಲರೂ ದುಃಖದಿಂದ ಗೋಳಾಡುತ್ತಿದ್ದರು. ಆದರೆ ಯೇಸು ಅವರಿಗೆ, “ಅಳಬೇಡಿ, ಆಕೆ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಇತ್ತ, ಸತ್ತ ಬಾಲಕಿಗಾಗಿ ಎಲ್ಲರೂ ಅತ್ತು ಗೋಳಾಡುತ್ತಾ ಇದ್ದರು. ಯೇಸುವಾದರೋ, “ಅಳಬೇಡಿ, ಅವಳು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡುಕೊಳ್ಳುತ್ತಾ ಇದ್ದರು. ಯೇಸು - ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ಸಗ್ಳೆ ಜಾನಾ ಪೊರಾ ಸಾಟ್ನಿ ತಳ್ಮಳಿತ್, ಅನಿ ರಡಿತ್, ತನ್ನಾ ಜೆಜುನ್ ತೆಂಕಾ “ರಡುನಕಾಶಿ; ತೆ ಚೆಡು ಮರುಕ್ನಾ, ನಿದ್ಲಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.