Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:8 - ಪರಿಶುದ್ದ ಬೈಬಲ್‌

8 ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಉಲ್ಲೆ ಭ್ಹಿಂಯ್ ಬರ್‍ಯಾ ಮಾಟಿತ್ ಪಡ್ಲೆ ಝಾಡಾ ಮೊಟಿ ಹೊಲಿ, ಅನಿ ಸೆಂಬರ್ ವಾಟ್ಯಾನಿ ಫಳ್ ದಿಲ್ಯಾನಿ” “ತುಮ್ಕಾ ಆಯ್ಕುಕ್ ಮನ್ ರ್‍ಹಾಲ್ಯಾರ್ ಆಯ್ಕಾ?” ಮನುನ್ ಸಾಂಗುನ್ ಕಾನಿ ಮುಗಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:8
25 ತಿಳಿವುಗಳ ಹೋಲಿಕೆ  

ಜನರೇ, ನಾನು ಹೇಳುವುದನ್ನು ಕೇಳಿರಿ. ಆಲಿಸಿರಿ!


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


“ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು.


ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಆ ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”


“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.


ನಮಗೆ ನೋಡಲು ಕಣ್ಣುಗಳಿವೆ. ಕೇಳಲು ಕಿವಿಗಳಿವೆ. ಅವುಗಳನ್ನು ನಮಗೋಸ್ಕರ ಉಂಟುಮಾಡಿದವನು ಯೆಹೋವನೇ.


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ಕೇಳಿರಿ, ಗಮನ ಕೊಡಿರಿ; ದೇವರು ನಿಮಗೆ ಹೇಳಿದ್ದಾನೆ. ಗರ್ವಪಡಬೇಡಿರಿ.


ಕೇಳಿ! ಜ್ಞಾನವೆಂಬಾಕೆಯೂ ವಿವೇಕವೆಂಬಾಕೆಯೂ “ಕಿವಿಗೊಡಿರಿ” ಎಂದು ನಿಮ್ಮನ್ನು ಕೂಗಿ ಕರೆಯುತ್ತಿದ್ದಾಳೆ.


ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.


ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸ್ವಲ್ಪವೂ ಗಮನಕೊಟ್ಟಿಲ್ಲ.


ನನ್ನ ಮಾತುಗಳನ್ನು ಕೇಳುತ್ತಿರುವ ಜನರೇ, ಆಲಿಸಿರಿ!


ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯೆ ಬಿದ್ದವು. ಅವುಗಳು ಮೊಳೆತರೂ ಮುಳ್ಳುಗಿಡಗಳಿಂದ ಬೆಳೆಯಲಾಗಲಿಲ್ಲ.


ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.


ಇವುಗಳನ್ನು ಕೇಳುವವನು ಗಮನವಿಟ್ಟು ಆಲಿಸಲಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು