10 ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.
ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು.