Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:19 - ಪರಿಶುದ್ದ ಬೈಬಲ್‌

19 ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಶಿಸಾನಿ ತೆಕಾ “ಅನಿ ಉಲ್ಲಿ ಲೊಕಾ ಜುವಾಂವ್ ಬಾವ್ತಿಸ್ ಮನ್ತ್ಯಾತ್,ಉಲ್ಲಿ ಲೊಕಾ ತಿಯಾ ಎಲಿಯಾ ಮನ್ತ್ಯಾತ್, ಅನಿ ಹುರಲ್ಲೆ ಅದ್ಲ್ಯಾ ಕಾಲಾತ್ಲ್ಯಾ ಪ್ರವಾದ್ಯಾನಿತ್ಲೊ ಎಕ್ಲೊ ಪ್ರವಾದಿ ಅನಿ ಪರ್‍ತುನ್ ಝಿತ್ತೊ ಹೊವ್ನ್ ಯೆಲಾ ಮನ್ತ್ಯಾತ್”, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:19
12 ತಿಳಿವುಗಳ ಹೋಲಿಕೆ  

ಯೆಹೂದ್ಯರು ಯೋಹಾನನಿಗೆ, “ಹಾಗಾದರೆ ನೀನು ಯಾರು? ನೀನು ಎಲೀಯನೋ?” ಎಂದು ಕೇಳಿದರು. ಅವನು, “ಇಲ್ಲ, ನಾನು ಎಲೀಯನಲ್ಲ” ಎಂದು ಉತ್ತರಿಸಿದನು. ಯೆಹೂದ್ಯರು, “ನೀನು ಪ್ರವಾದಿಯೋ?” ಎಂದು ಕೇಳಿದರು. ಯೋಹಾನನು, “ಇಲ್ಲ, ನಾನು ಪ್ರವಾದಿಯಲ್ಲ” ಎಂದು ಉತ್ತರಕೊಟ್ಟನು.


ಇನ್ನು ಕೆಲವರು, “ಇವನು ಎಲೀಯ”ನೆಂದು ಹೇಳಿದರು. ಇತರ ಜನರು, “ಯೇಸು ಒಬ್ಬ ಪ್ರವಾದಿ. ಬಹುಕಾಲದ ಹಿಂದೆ ಜೀವಿಸಿದ್ದ ಪ್ರವಾದಿಗಳಂತೆ ಇವನೂ ಒಬ್ಬನು” ಎಂದು ಹೇಳಿದರು.


ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.


ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು.


ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.


ಈ ಸಂಗತಿಗಳನ್ನು ಕೇಳಿದ ಜನರಲ್ಲಿ ಕೆಲವರು, “ಈ ಮನುಷ್ಯನು ನಿಜವಾಗಿಯೂ ಪ್ರವಾದಿ” ಎಂದರು.


ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ’ ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು.


ಆ ಕಾಲದಲ್ಲಿ ಸ್ನಾನಿಕ ಯೋಹಾನನು ಜುದೇಯದ ಅಡವಿಯಲ್ಲಿ ಬೋಧಿಸುವುದಕ್ಕೆ ಪ್ರಾರಂಭಿಸಿದನು.


ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕನಾದ ಯೋಹಾನ. ಇವನು ಮತ್ತೆ ಬದುಕಿಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.


ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.


ಆಗ ಯೇಸು, “ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಶಿಷ್ಯರನ್ನು ಕೇಳಿದನು. ಪೇತ್ರನು, “ನೀನು ದೇವರಿಂದ ಬಂದ ಕ್ರಿಸ್ತನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು