Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:23 - ಪರಿಶುದ್ದ ಬೈಬಲ್‌

23 ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ಪ್ರತಿದಿನ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ದಿನಾಲೂ ಹೊತ್ತುಕೊಂಡು ನನ್ನ ಹಿಂದೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾನಾ ಜೆಜುನ್ ಸಗ್ಳ್ಯಾಕ್ನಿ “ಕೊನ್ ತರ್ ಮಾಜ್ಯಾ ವಾಂಗ್ಡಾ ಯೆವ್ಚೆ ಮನುನ್ ಹಾಯ್ ಜಾಲ್ಯಾರ್,ತೆನಿ ಅಪ್ನಾಕುಚ್‍ ಇಸ್ರುಕ್ ಪಾಜೆ. ಸದ್ದಿಚ್ ತೆಚೊ ಕುರಿಸ್ ವಾವುನ್ ಘೆವ್ಕ್ ಪಾಜೆ, ಅನಿ ಮಾಜ್ಯಾ ಫಾಟ್ನಾ ಯೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:23
11 ತಿಳಿವುಗಳ ಹೋಲಿಕೆ  

ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ.


ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು.


ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು