ಲೂಕ 9:28 - ಪರಿಶುದ್ದ ಬೈಬಲ್28 ಯೇಸು ಈ ಸಂಗತಿಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ನಂತರ, ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕೆ ಬೆಟ್ಟದ ಮೇಲೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರಕೊಂಡು ಪ್ರಾರ್ಥನೆಮಾಡುವದಕ್ಕೆ ಬೆಟ್ಟವನ್ನು ಹತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆ ಸಗ್ಳೆ ಸಾಂಗುನ್ ಆಟ್ ದಿಸ್ ಹೊಲ್ಲ್ಯಾ ಮಾನಾ, ಪೆದ್ರುಕ್,ಜುವಾಂವಾಕ್, ಅನಿ ಜಾಕೊಬಾಕ್ ಘೆವ್ನ್ ಜೆಜು ಮಾಗ್ನಿ ಕರುಕ್ ಮನುನ್ ಎಕ್ ಮಡ್ಡಿ ವರ್‍ತಿ ಗೆಲೊ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.