Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:34 - ಪರಿಶುದ್ದ ಬೈಬಲ್‌

34 ಪೇತ್ರನು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಮೋಡವು ಬಂದು ಅವರ ಸುತ್ತಲೂ ಆವರಿಸಿತು. ಆಗ ಪೇತ್ರ, ಯಾಕೋಬ ಮತ್ತು ಯೋಹಾನನಿಗೆ ಭಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಅವರು ಮೋಡದೊಳಗೆ ಸೇರಿದಾಗ ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೊ ಬೊಲ್ತಾ-ಬೊಲ್ತಾನಾಚ್ ಎಕ್ ಮೊಡ್ ಯೆಲೆ, ಅನಿ ತೆಚ್ಯಾ ಸಾವ್ಳಿನ್ ತೆಂಕಾ ಧಾಪ್ಲಿನ್.ಮೊಡಾಚ್ಯಾ ಸಾವ್ಳಿ ಬಗುನ್ ಶಿಸಾ ಭಿಂಯಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:34
12 ತಿಳಿವುಗಳ ಹೋಲಿಕೆ  

ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ನಾನೊಬ್ಬನೇ ಅಲ್ಲಿದ್ದೆ. ನಾನು ಆ ದರ್ಶನವನ್ನು ನೋಡುತ್ತಲೇ ಇದ್ದೆ. ಅದರಿಂದ ನನಗೆ ಭಯವಾಯಿತು. ನಾನು ದುರ್ಬಲನಾದೆ. ನನ್ನ ಮುಖವು ಸತ್ತವರ ಮುಖದಂತೆ ಬಿಳುಪೇರಿತು; ನಾನು ನಿಸ್ಸಹಾಯಕನಾದೆ.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ನಂತರ ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಣ್ಣಾರೆ ಕಂಡೆವು, ಆದ್ದರಿಂದ ಖಂಡಿತವಾಗಿ ನಾವು ಸತ್ತುಹೋಗುತ್ತೇವೆ” ಅಂದನು.


ತಾನು ಈವರೆಗೆ ಮಾತಾಡುತ್ತಿದ್ದದ್ದು ಯೆಹೋವನ ದೂತನೊಡನೆ ಎಂಬುದು ಗಿದ್ಯೋನನಿಗೆ ಆಗ ಅರಿವಾಯಿತು. ಗಿದ್ಯೋನನು, “ಸರ್ವಶಕ್ತನಾದ ಯೆಹೋವನೇ, ನಿನ್ನ ದೂತನನ್ನು ಮುಖಾಮುಖಿಯಾಗಿ ಕಂಡೆನು” ಎಂದು ಕೂಗಿಕೊಂಡನು.


ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.)


ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು ಇವನೇ. ಈತನಿಗೆ ವಿಧೇಯರಾಗಿರಿ” ಎಂಬ ವಾಣಿ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು