ಲೂಕ 9:54 - ಪರಿಶುದ್ದ ಬೈಬಲ್54 ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, “ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶಮಾಡಲಿ ಎಂದು ಆಜ್ಞೆಮಾಡಬಹುದಲ್ಲವೇ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ಕಂಡು - ಸ್ವಾಮೀ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶಮಾಡಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಜಾಕೊಬ್ ಅನಿ ಜುವಾಂವ್ ಹೆ ಬಗುನ್ “ಧನಿಯಾ, ಸರ್‍ಗಾ ವೈನಾ ಆಗ್ ಯೆವ್ನ್ ಹ್ಯಾ ಲೊಕಾಕ್ನಿ ಭಾಜುನ್ ಟಾಕುಂದಿ ಮನುನ್ ಮಾಗುವಾ ಕಾಯ್?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.