Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:55 - ಪರಿಶುದ್ದ ಬೈಬಲ್‌

55 ಆದರೆ ಯೇಸು ಅವರ ಕಡೆಗೆ ತಿರುಗಿ ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ,” ಎಂದು ಅವರನ್ನು ಖಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಎಂದು ನಾವು ಹೇಳುವದಕ್ಕೆ ನಿನಗೆ ಮನಸ್ಸುಂಟೋ ಎಂದು ಕೇಳಲು ಆತನು ತಿರುಗಿಕೊಂಡು ಅವರನ್ನು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಖರೆ ಜೆಜು ಪರತ್ಲೊ, ಅನಿ ತೆಂಕಾ ಜೊರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:55
24 ತಿಳಿವುಗಳ ಹೋಲಿಕೆ  

“ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ.


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ಇವುಗಳನ್ನು ತಿಳಿಸಲು ನಿನಗೆ ಯಾರು ಸಹಾಯ ಮಾಡಿದವರು? ಯಾರ ಆತ್ಮವು ನಿನ್ನನ್ನು ಪ್ರೇರೇಪಿಸಿತು?


ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.


ಆಗ ಯೇಸುವಿನ ಶಿಷ್ಯರಲ್ಲೊಬ್ಬನು ತನ್ನ ಖಡ್ಗವನ್ನು ಹೊರಕ್ಕೆ ಸೆಳೆದು ಮಹಾಯಾಜಕನ ಸೇವಕನಿಗೆ ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು.


ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಮನಸ್ಸೇನೋ ಸಿದ್ಧವಾಗಿದೆ ಆದರೆ ದೇಹಕ್ಕೆ ಬಲಸಾಲದು” ಎಂದು ಹೇಳಿದನು.


ಪೇತ್ರನು, “ಉಳಿದ ಶಿಷ್ಯರೆಲ್ಲರೂ ನಿನ್ನ ದೆಸೆಯಿಂದ ತಮ್ಮ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಆದರೆ ನಾನು ಮಾತ್ರ ಹಾಗೆ ಮಾಡುವುದಿಲ್ಲ” ಎಂದು ಉತ್ತರಕೊಟ್ಟನು.


ಆಗ ಯೇಸು ಪೇತ್ರನಿಗೆ, “ಸೈತಾನನೇ, ಇಲ್ಲಿಂದ ತೊಲಗು! ನೀನು ನನಗೆ ಅಡ್ಡಿಯಾಗಿರುವೆ! ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ” ಎಂದು ಹೇಳಿದನು.


“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷ ಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು.


ಯೆಹೋವನೇ, ನನ್ನ ವಿಷಯದಲ್ಲಿ ನನಗೇ ನಾಚಿಕೆಯಾಗಿದೆ. ನನಗೆ ಎಷ್ಟೋ ದುಃಖವಾಗಿದೆ. ನಾನು ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತುಕೊಳ್ಳುತ್ತೇನೆ. ನನ್ನ ಹೃದಯವನ್ನೂ ಜೀವಿತವನ್ನೂ ಮಾರ್ಪಡಿಸಿಕೊಳ್ಳುವುದಾಗಿ ನಾನು ನಿನಗೆ ವಾಗ್ದಾನ ಮಾಡುತ್ತೇನೆ.”


ದಾವೀದನು, “ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ಈ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ಈ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ” ಎಂದನು.


ಹೊಗಳಿಕೆ ಮತ್ತು ತೆಗಳಿಕೆಗಳೆರಡೂ ಒಂದೇ ಬಾಯಿಂದ ಬರುತ್ತವೆ! ನನ್ನ ಸಹೋದರ ಸಹೋದರಿಯರೇ, ಇದು ಸಂಭವಿಸಲೇಬಾರದು.


ನನ್ನನ್ನು ನಂಬದಿರುವುದರಿಂದ ಜನರಲ್ಲಿ ಪಾಪವಿದೆಯೆಂದು ಆ ಸಹಾಯಕನು ನಿರೂಪಿಸುವನು.


ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು.


ಬಳಿಕ ಯೇಸು ಮತ್ತು ಆತನ ಶಿಷ್ಯರು ಇನ್ನೊಂದು ಪಟ್ಟಣಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು