ವಿಮೋಚನಕಾಂಡ 1:14 - ಪರಿಶುದ್ದ ಬೈಬಲ್14 ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು. ಅಧ್ಯಾಯವನ್ನು ನೋಡಿ |
ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”