ವಿಮೋಚನಕಾಂಡ 1:17 - ಪರಿಶುದ್ದ ಬೈಬಲ್17 ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಡುವವರಾದದರಿಂದ ಐಗುಪ್ತ್ಯರ ಅರಸನ ಮಾತಿನಂತೆ ಮಾಡದೆ ಗಂಡುಮಕ್ಕಳನ್ನೂ ಉಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”