ವಿಮೋಚನಕಾಂಡ 1:19 - ಪರಿಶುದ್ದ ಬೈಬಲ್19 ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ಫರೋಹನಿಗೆ ಸೂಲಗಿತ್ತಿಯರು, “ಹಿಬ್ರಿಯ ಮಹಿಳೆಯರು ಈಜಿಪ್ಟಿನ ಮಹಿಳೆಯರಂತಲ್ಲ; ಏಕೆಂದರೆ ಅವರು ಗಟ್ಟಿಮುಟ್ಟಾದವರು. ಸೂಲಗಿತ್ತಿಯರು ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತಲ್ಲ; ಅವರು ಚುರುಕಾಗಿದ್ದಾರೆ; ಅವರು ಸೂಲಗಿತ್ತಿಯು ತಮ್ಮ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುವರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸೂಲಗಿತ್ತಿಯರು ಫರೋಹನಿಗೆ, “ಹಿಬ್ರಿಯರ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯರು ಅವರ ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿ |