Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:22 - ಪರಿಶುದ್ದ ಬೈಬಲ್‌

22 ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತರುವಾಯ ಫರೋಹನು ತನ್ನ ಜನರಿಗೆಲ್ಲಾ - [ಇಬ್ರಿಯರ] ಗಂಡುಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು ಎಂದು ಆಜ್ಞೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:22
11 ತಿಳಿವುಗಳ ಹೋಲಿಕೆ  

ಈ ರಾಜನು ನಮ್ಮ ಜನರಿಗೆ ಮೋಸ ಮಾಡಿದನು. ಅವನು ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದನು. ಅವರ ಕೂಸುಗಳನ್ನು ಸಾಯಿಸಬೇಕೆಂದು ಹೊರಗೆ ಹಾಕಿಸಿದನು.


ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.


ಆದ್ದರಿಂದ ಈಜಿಪ್ಟಿನವರು ಯಾಕೋಬನ ಕುಟುಂಬವನ್ನು ದ್ವೇಷಿಸತೊಡಗಿದರು. ಅವರು ತಮ್ಮ ಗುಲಾಮರ ವಿರೋಧವಾಗಿ ಸಂಚುಗಳನ್ನು ಮಾಡತೊಡಗಿದರು.


“ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.


ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.


ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು