Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:7 - ಪರಿಶುದ್ದ ಬೈಬಲ್‌

7 ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:7
29 ತಿಳಿವುಗಳ ಹೋಲಿಕೆ  

ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.


ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.


ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ತುಂಬಿಕೊಳ್ಳಿರಿ.


ಅವರ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡಿದೆ. ಅವರ ಪೂರ್ವಿಕರಿಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ತಂದೆ. ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು.


ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.


ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು.


ಯಾಕೋಬನ ಕುಟುಂಬ ಬಹು ದೊಡ್ಡದಾಯಿತು. ಅವರು ಈಜಿಪ್ಟಿನವರಿಗಿಂತಲೂ ಬಲಿಷ್ಠರಾದರು.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.


ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.


ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.


ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ “ರೆಹೋಬೋತ್” ಎಂದು ಹೆಸರಿಟ್ಟನು.


ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.


ಇಲ್ಲಿ ಬಹಳ ಮಂದಿ ಕೆಲಸಗಾರರಿದ್ದಾರೆ; ಅವರು ಕೆಲಸ ಮಾಡದಂತೆ ನೀವು ತಡೆಯುವುದೇಕೆ?” ಎಂದು ಹೇಳಿದನು.


ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.


ನಾನು, ಹೊಲದಲ್ಲಿ ಸಸಿಯು ಹೇಗೆ ಬೆಳೆಯುತ್ತದೋ ಹಾಗೆಯೇ ನೀನು ಬೆಳೆಯಲು ಸಹಾಯ ಮಾಡಿದೆನು. ನೀನು ಬೆಳೆಯುತ್ತಾ ಯೌವನದ ಹೊಸ್ತಿಲಲ್ಲಿ ಕಾಲಿಟ್ಟ ಹೆಂಗಸಿನಂತಾದೆ. ನಿನಗೆ ಮುಟ್ಟು ಪ್ರಾರಂಭವಾಯಿತು. ನಿನ್ನ ಸ್ತನಗಳು ಬೆಳೆದವು. ಕೂದಲುಗಳು ಬೆಳೆದವು. ಆದರೂ ನೀನು ಬಟ್ಟೆಯಿಲ್ಲದವಳಾಗಿ ಬೆತ್ತಲೆಯಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು